ಬೆಂಗಳೂರು: ಇತ್ತೀಚೆಗೆ ಜೈಲಿನಲ್ಲಿ ಕೈದಿಗಳು ಮದ್ಯದ ಪಾರ್ಟಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋವನ್ನು ದರ್ಶನ್ ಆಪ್ತರಾಗಿರುವ ನಟ ಧನ್ವೀರ್ ಅವರು ಲೀಕ್ ಮಾಡಿದ್ದಾರೆ ಎನ್ನುವ ಆರೋಪವನ್ನು ಹೊರಿಸಲಾಗಿದೆ. ಈ ಸಂಬಂಧ ವಿಚಾರಣೆ ಮುಂದುವರೆದಿದೆ.

ಈಗಾಗಲೇ ಕೈದಿಗಳಿಗೆ ಜೈಲಿನ ರಾಜಾತಿಥ್ಯ ವಿಡಿಯೋ ಸೋರಿಕೆ ಸಂಬಂಧ ಧನ್ನೀರ್ ಅವರನ್ನು ಒಂದು ಬಾರಿ ವಿಚಾರಣೆಗೆ ಒಳಪಡಿಸಲಾಗಿದೆ. ಮೊದಲ ವಿಚಾರಣೆ ವೇಳೆ ಧನ್ನೀರ್ ಅವರು ಯಾವುದೇ ವಿಷಯವನ್ನು ಬಾಯಿಬಿಟ್ಟಿರಲಿಲ್ಲ. ಹೀಗಾಗಿ ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿತ್ತು.
ಎರಡನೇ ಬಾರಿಯ ವಿಚಾರಣೆಯಲ್ಲಿ ನಟ ಧನ್ನೀರ್ ಅವರು ಹಲವು ವಿಷಯಗಳನ್ನು ಬಹಿರಂಗಪಡಿಸಿದ್ದಾರೆ. ಈ ವೇಳೆ ಅವರು ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ಹೆಸರನ್ನು ಹೇಳಿದ್ದಾರೆ.
ಧನ್ವಿರ್‌ಗೆ ವಿಡಿಯೋ ಮೊದಲು ಸಿಕ್ಕಿದ್ದು ವಕೀಲರಿಂದ, ಆ ಬಳಿಕ ಅವರು ವಿಡಿಯೋವನ್ನು ವಿಜಯಲಕ್ಷ್ಮೀಗೆ ಕಳುಹಿಸಿದ್ದಾರೆ. ಇದೇ ವಿಚಾರವನ್ನು ಧನ್ವೀರ್ ವಿಚಾರಣೆಯಲ್ಲಿ ಹೇಳಿದ್ದಾರೆ.
‘ನಾನು ವೀಡಿಯೋ ವೈರಲ್ ಮಾಡಿಲ್ಲ. ಈ ವಿಡಿಯೋ ಹೇಗೆ ವೈರಲ್ ಆಗಿದೆ ಅನ್ನೋದು ಗೊತ್ತಿಲ್ಲ. ನಾನು ವಿಜಯಲಕ್ಷ್ಮೀ ಅವರಿಗೆ ವಿಡಿಯೋನ ಫಾರ್ವಡ್್ರ ಮಾಡಿದ್ದೆ’ ಎಂದು dhanveer ಮಾಹಿತಿ ನೀಡಿದ್ದಾರೆ.
ಪ್ರಕರಣದಲ್ಲಿ ವಿಜಯಲಕ್ಷ್ಮೀ ಅವರ ಹೆಸರು ಕೇಳಿ ಬರುತ್ತಿದ್ದಂತೆ ಅಧಿಕಾರಿಗಳು ವಿಚಾರಣೆಗೆ ವಿಜಯಲಕ್ಷ್ಮೀ ಅವರನ್ನು ಕರೆಯುವ ಸಾಧ್ಯತೆಯಿದೆ ಎನ್ನಲಾಗಿದೆ. ಸದ್ಯ ಧನ್ನೀರ್ ಅವರನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಿದ್ದು, ಸರಿಯಾಗಿ ಸ್ಪಂದಿಸದೇ ಇದ್ದರೆ, ವಿಜಯಲಕ್ಷ್ಮೀ ಅವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ವಿಡಿಯೋ ಅಪ್ಲೋಡ್ ಮಾಡಿದ್ದು ಯಾರು ಎನ್ನುವ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಸಂಬಂಧ ಫೇಸ್‌ಬುಕ್ ಒಡೆತನದ ಮೆಟಾಗೆ ಪರಪ್ಪನ ಅಗ್ರಹಾರ ಪೊಲೀಸರು ಇಮೇಲ್ ಮೂಲಕ ಮಾಹಿತಿ ಕೇಳಿದ್ದಾರೆ ಎಂದು ವರದಿಯಾಗಿದೆ.




