ಬೆಂಗಳೂರು : ಸಾಲುಮರದ ತಿಮ್ಮಕ್ಕನ ಹೆಸರಿನಲ್ಲಿ ಪ್ರತಿ ವರ್ಷ ಕನಿಷ್ಠ 5 ಪರಿಸರವಾದಿಗಳಿಗೆ ಪ್ರಶಸ್ತಿ ನೀಡಲಾಗುವುದು ಎಂದು CM ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬೆಂಗಳೂರಿನ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದಲ್ಲಿ CM ಈ ವಿಚಾರ ತಿಳಿಸಿದ್ದಾರೆ. ‘ತಿಮ್ಮಕ್ಕನ ಹೆಸರಿನಲ್ಲಿ ಪ್ರಶಸ್ತಿ ನೀಡುವ ಉದ್ದೇಶದಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಒಂದು ಕೋಟಿ ರೂ. ದತ್ತಿ ನಿಧಿ ಸ್ಥಾಪಿಸಿ, ಆ ಠೇವಣಿಯಿಂದ ಬಡ್ಡಿ ಮೊತ್ತದಲ್ಲಿ ಪ್ರತಿ ವರ್ಷವೂ ಐವರಿಗೆ ಪ್ರಶಸ್ತಿ ನೀಡಲಾಗುವುದು’ ಎಂದಿದ್ದಾರೆ.




