ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ..! ಸುಟ್ಟು ಕರಕಲಾದ ಕಾರು

Share with

ಉಪ್ಪುಂದ: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಸಂಪೂರ್ಣ ಕಾರು ಸುಟ್ಟು ಕರಕಲಾದ ಘಟನೆ ನಾವುಂದ ಫ್ಲೈ ಓವರ್‌ ಮೇಲೆ ಗುರುವಾರ(ನ.20) ಮಧ್ಯಾಹ್ನ ನಡೆದಿದೆ.

ಕುಂದಾಪುರ ಕಲ್ಕೆರೆಯಿಂದ ಉಪ್ಪುಂದಕ್ಕೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಕಾರು ಚಾಲಕ ನಿತೇಶ್(31) ಮತ್ತು ಚಂದು (73) ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯಿಂದ ರಸ್ತೆಯುದ್ದಕ್ಕೂ ದಟ್ಟ ಹೊಗೆ ಆವರಿಸಿ, ಹೆದ್ದಾರಿ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಘಟನಾ ಸ್ಥಳಕ್ಕಾಗಮಿಸಿದ ಬೈಂದೂರು ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಈ ಕುರಿತು ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *