RCB ವಿಜಯೋತ್ಸವದ ಸಂದರ್ಭ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಾಧೀಶ ಮೈಕಲ್ ಕುನ್ಹಾ ಅವರ ವರದಿಯನ್ನು ಪ್ರಶ್ನಿಸಿ DNA ಎಂಟರ್ಟೈನ್ಮಂಟ್ ಸಂಸ್ಥೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿಯ ಸಂಬಂಧ ವಾದ-ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್ ವಿಭಾಗೀಯ ಪೀಠ, ಡಿಎನ್ಎ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ನ್ಯಾ. ಡಿ.ಕೆ. ಸಿಂಗ್ ಮತ್ತು ನ್ಯಾ. ತಾರಾ ವಿತಾಸ್ತಾ ಗಂಜು ಅವರ ವಿಭಾಗೀಯ ಪೀಠ ಈ ಆದೇಶ ನೀಡಿದೆ.




