ಉಡುಪಿಗೆ ಮೋದಿ.. ಕಾರ್ಯಕ್ರಮಕ್ಕೆ ಭೇಟಿ ನೀಡುವವರಿಗೆ ಸಾಸ್ತಾನ ಟೋಲ್ ಗೇಟ್ ನಲ್ಲಿ ಉಚಿತ ಪ್ರವೇಶ

Share with

ಉಡುಪಿ: ನ.28ರಂದು ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣಮಠದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಹಿನ್ನೆಲೆಯಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುತ್ತಿದ್ದು ಸಕಲ ಸಿದ್ಧತೆಗಳು ಪೂರ್ಣಗೊಂಡಿದೆ.

ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಅಂದರೆ ಬೆಳಗ್ಗೆ 11 ರಿಂದ 11.30 ರ ವರೆಗೆ ನಡೆಯಲಿದೆ. ಇದಾದ ಬಳಿಕ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಅನಂತರ ಗೀತಾಮಂದಿರಕ್ಕೆ ಭೇಟಿ ನೀಡಿ, ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಿ ಪಾರ್ಕಿಂಗ್ ಪ್ರದೇಶದ ಸಮೀಪದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇದಾದ ಬಳಿಕ ಮಧ್ಯಾಹ್ನ 1 ಗಂಟೆಗೆ ಪ್ರಧಾನಿ ಮೋದಿ ನಿರ್ಗಮಿಸಲಿದ್ದಾರೆ.

ಸಾಸ್ತಾನ ಟೋಲ್ ನಲ್ಲಿ ಉಚಿತ ಪ್ರವೇಶ:

ಇನ್ನು ಉಡುಪಿಯಲ್ಲಿ ನಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಉಡುಪಿ ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರ ವಾಹನಗಳಿಗೆ ಸಾಸ್ತಾನ ಟೋಲ್ ಗೇಟ್ ನಲ್ಲಿ ಉಚಿತ ಪ್ರವೇಶಕ್ಕೆ ಅನುವು ಮಾಡಲಾಗಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *