ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ – ಸಿಎಂ ಪರವಾಗಿ ಮೋದಿಗೆ ಮನವಿ ಸಲ್ಲಿಸಿದ ದಿನೇಶ್ ಗುಂಡೂರಾವ್

Share with

ಮಂಗಳೂರು: ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಪ್ರಧಾನಿ ಮೋದಿಗೆ ಸಚಿವ ದಿನೇಶ್ ಗುಂಡೂರಾವ್ ಮನವಿ ಸಲ್ಲಿಸಿದರು.

ಇಂದು (ನ.28) ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡುವ ಹಿನ್ನೆಲೆ ಮಂಗಳೂರಿಗೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರನ್ನು ಸಚಿವ ದಿನೇಶ್ ಗುಂಡೂರಾವ್ ಸ್ವಾಗತಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಪರವಾಗಿ ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಮನವಿ ಸಲ್ಲಿಸಿದರು.

ಈ ಕುರಿತು ಸಚಿವ ದಿನೇಶ್ ಗುಂಡರಾವ್ ಪೋಸ್ಟ್ ಹಂಚಿಕೊಂಡಿದ್ದು, ರೈತರ ಬೆಳೆಗಳಿಗೆ ಬೆಂಬಲ ಬೆಲೆಯಿಲ್ಲದೆ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಬೆಂಬಲ ಬೆಲೆಯಂತೆ ಬೆಳೆ ಖರೀದಿ ವ್ಯವಸ್ಥೆ ನಿರ್ಮಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇಚ್ಛಾಶಕ್ತಿ ತೋರಿಸಬೇಕೆಂದು ಮನವಿ ಮಾಡಿಕೊಂಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಪತ್ರದಲ್ಲೇನಿದೆ?
ಕರ್ನಾಟಕದಲ್ಲಿ ಮೆಕ್ಕೆಜೋಳ ಮತ್ತು ಹೆಸರು ಕಾಳು ಬೆಳೆಗಳ ತೀವ್ರ ಬೆಲೆ ಕುಸಿತದಿಂದ ರೈತರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಆದ ಬೆಂಬಲ ಬೆಲೆಯಲ್ಲಿ ರೈತರಬೆಳೆಗಳನ್ನು ಖರೀದಿಸುವಂತಹ ವ್ಯವಸ್ಥೆ ನಿರ್ಮಾಣ ಮಾಡಬೇಕು. ನಮ್ಮ ಲಕ್ಷಾಂತರ ರೈತರು ಜೀವನೋಪಾಯಕ್ಕಾಗಿ ಕೃಷಿ ಮಾಡಿರುವ ಬೆಳೆಗಳನ್ನು ಖರೀದಿಸುತ್ತಿರುವ ಬೆಲೆ ಕೇಂದ್ರ ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆಗಿಂತ ಬಹಳಷ್ಟು ಕಡಿಮೆ ಇದ್ದು, ಕೃಷಿಕರಲ್ಲಿ ವ್ಯಾಪಕ ಸಂಕಷ್ಟವನ್ನು ಸೃಷ್ಟಿಸಿದೆ. ಈ ಮುಂಗಾರು ಹಂಗಾಮಿನಲ್ಲಿ ಕರ್ನಾಟಕವು 17.94 ಲಕ್ಷ ಹೆಕ್ಟೇರ್‌ಗಳಿಗಿಂತ ಹೆಚ್ಚು ಪ್ರದೇಶದಲ್ಲಿ ಮೆಕ್ಕೆಜೋಳ ಮತ್ತು 4.16 ಲಕ್ಷ ಹೆಕ್ಟೇರ್‌ಗಳಿಗಿಂತ ಹೆಚ್ಚು ಪ್ರದೇಶದಲ್ಲಿ ಹೆಸರು ಕಾಳನ್ನು ಬೆಳೆದಿದೆ. ರಾಜ್ಯವು 54.74 ಲಕ್ಷ ಮೆಟ್ರಿಕ್ ಟನ್‌ಗಳಿಗಿಂತ ಹೆಚ್ಚು ಮೆಕ್ಕೆಜೋಳ ಮತ್ತು 1.983 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಹೆಸರು ಕಾಳಿನ ಅಂದಾಜು ಉತ್ಪಾದನೆಯನ್ನು ನಿರೀಕ್ಷಿಸುತ್ತಿದೆ. ಇದು ಸಮೃದ್ಧಿಗೆ ಒಂದು ಅವಕಾಶವಾಗಿರಬೇಕಾಗಿದ್ದರೂ, ಪ್ರಸ್ತುತ ಮಾರುಕಟ್ಟೆ ಪರಿಸ್ಥಿತಿಗಳು ಇದನ್ನು ಬಿಕ್ಕಟ್ಟಾಗಿ ಪರಿವರ್ತಿಸಿವೆ.

ಕೇಂದ್ರ ಸರ್ಕಾರವು ಮೆಕ್ಕೆಜೋಳಕ್ಕೆ ಪ್ರತಿ ಮೆಟ್ರಿಕ್ ಟನ್‌ಗೆ 2,400 ರೂ. ಮತ್ತು ಹೆಸರು ಕಾಳಿಗೆ ಪ್ರತಿ ಮೆಟ್ರಿಕ್ ಟನ್‌ಗೆ 8,768 ರೂ.ರಂತೆ ಒSP ಘೋಷಿಸಿದ್ದರೂ, ಕರ್ನಾಟಕದಲ್ಲಿ ಪ್ರಸ್ತುತ ಬೆಲೆ ಮೆಕ್ಕೆಜೋಳಕ್ಕೆ ಪ್ರತಿ ಮೆಟ್ರಿಕ್ ಟನ್‌ಗೆ 1,600-1,800 ರೂ. ಮತ್ತು ಹೆಸರು ಕಾಳಿಗೆ ಪ್ರತಿ ಮೆಟ್ರಿಕ್ ಟನ್‌ಗೆ 5,400 ರೂ. ಆಗಿದ್ದು, ಇದು ತೀವ್ರ ಮತ್ತು ಆಘಾತಕಾರಿ ಕುಸಿತವಾಗಿದೆ. ಕರ್ನಾಟಕದಲ್ಲಿ ಪ್ರಸ್ತುತ ಮಾರಾಟವಾಗಲು ಅಂದಾಜು 32 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಮೆಕ್ಕೆಜೋಳ ಲಭ್ಯವಿದೆ. ಆದ್ದರಿಂದ, ಭಾರತ ಸರ್ಕಾರವು ತಕ್ಷಣವೇ ಮಧ್ಯಪ್ರವೇಶಿಸಿ ಈ ಕೆಳಗಿನಂತೆ, ದರ ನಿಗದಿ ಮಾಡುವಂತೆ ವಿನಂತಿ ಮಾಡಲಾಗಿದೆ.


Share with

Leave a Reply

Your email address will not be published. Required fields are marked *