ಕಾಸರಗೋಡು: ಮನೆಗೆ ನುಗ್ಗಿ ರಬ್ಬರ್ ಟ್ಯಾಪಿಂಗ್ ಕಾರ್ಮಿಕನಿಗೆ ಇರಿದು ಗಂಭೀರ ಗಾಯಗೊಳಿಸಿದ ಪ್ರಕರಣದಲ್ಲಿ ಅಡೂರು ಅತ್ತನಾಡಿ ನಿವಾಸಿ ಸುಂದರ(38) ನಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ ಮೂರು ವರ್ಷ ಕಠಿಣ ಸಜೆ ಹಾಗು 30 ಸಾ. ರೂ. ದಂಡ ವಿಧಿಸಿ ತೀರ್ಪು ನೀಡಿದೆ. ದಂಡ ಪಾವತಿಸದಿದ್ದಲ್ಲಿ ಮೂರು ತಿಂಗಳು ಹೆಚ್ಚುವರಿ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದೆ.

2018 ನ.15ರಂದು ಬೆಳಗ್ಗೆ ಅಡೂರು ಮೈನಾಡಿನಲ್ಲಿ ಮದ್ಯ ಸೇವಿಸಲು ನೀಡಿದ ಹಣವನ್ನು ಹಿಂತಿರುಗಿಸುವಂತೆ ಕೇಳಿದಾಗ ಅದನ್ನು ನೀಡದ ದ್ವೇಷದಿಂದ ಕಣ್ಣನ್ ಅವರಿಗೆ ಇರಿದು ಗಂಭೀರ ಗಾಯಗೊಳಿಸಿದ ಬಗ್ಗೆ ಆದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣದಲ್ಲಿ ಆರೋಪಿಗೆ ಸಜೆ, ದಂಡ ವಿಧಿಸಿದೆ.




