ಸಿದ್ದರಾಮಯ್ಯನವರನ್ನು ಇಳಿಸಿದ್ರೆ ಕಾಂಗ್ರೆಸ್‌ ವಿರುದ್ಧ ಮತ – ಕುರುಬ ಸಂಘದಿಂದ ಎಚ್ಚರಿಕೆ

Share with

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾದ ಕುರ್ಚಿ ಕಿತ್ತಾಟದ ವಿಚಾರವಾಗಿ ಡಿಕೆ ಶಿವಕುಮಾರ್‌ ಪರವಾಗಿ ಒಕ್ಕಲಿಗ ಸಮುದಾಯದ ಬ್ಯಾಟಿಂಗ್ ಬೆನ್ನಲ್ಲೇ ಸಿಎಂ ಪರವಾಗಿ ಕುರುಬ ಸಮಾಜ ಕೂಡ ಅಖಾಡಕ್ಕಿಳಿದಿದೆ. ಒಂದು ವೇಳೆ ಸಿದ್ದರಾಮಯ್ಯನವರನ್ನು ಸಿಎಂ ಪಟ್ಟದಿಂದ ಕೆಳಗೆ ಇಳಿಸಿದರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದೆ.

ಈ ಸಂಬಂಧ ಇಂದು ಬೆಂಗಳೂರಿನ ಕರ್ನಾಟಕ ಪ್ರದೇಶ ಕುರುಬ ಸಮಾಜದ ಕಛೇರಿಯಲ್ಲಿ ಸಮುದಾಯದ ಶ್ರೀಗಳು, ಮುಖಂಡರು ಸಭೆ ಮಾಡಿ, ಸಿಎಂ ಸ್ಥಾನ ಬದಲಾವಣೆ ಮಾಡದಂತೆ ಒತ್ತಾಯಿಸಿ ಸಿಎಂ ಬೆನ್ನಿಗೆ ನಿಂತಿದ್ದಾರೆ.


Share with

Leave a Reply

Your email address will not be published. Required fields are marked *