ಪುತ್ತೂರು: ಕಬಕ ಗ್ರಾಮದ ಮುರದಲ್ಲಿರುವ ರೈಲ್ವೇ ಸೇತುವೆ ಬಳಿ ಮಾದಕ ಪದಾರ್ಥ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಕಬಕ ನಿವಾಸಿ ಉಮ್ಮರ್ ಫಾರೂಕ್ (41) ಎಂಬಾತನನ್ನು ನಗರದ ಪೊಲೀಸರು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪುತ್ತೂರು ನಗರ ಠಾಣೆಯ ಎಸ್ಐ ಆಂಜನೇಯ ರೆಡ್ಡಿ ಮತ್ತು ಸಿಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಆರೋಪಿಯ ಬಳಿ ಮಾರಾಟ ಮಾಡಲು ಅಕ್ರಮವಾಗಿ ಇಟ್ಟುಕೊಂಡಿದ್ದ 10 ಗ್ರಾಂ ಎಂಡಿಎಂಎ ಪತ್ತೆಯಾಗಿದೆ. ಬಂಧಿತನ ಪ್ರಾಥಮಿಕ ವಿಚಾರಣೆ ವೇಳೆ ಆತನ ವಿರುದ್ಧ ಜಿಲ್ಲಾ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ 6 ಪ್ರಕರಣಗಳು ದಾಖಲಾಗಿರುವುದು ಕಂಡು ಬಂದಿದೆ.




