ಮಲಪ್ಪುರಂ (ಕೇರಳ): ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆ ಪ್ರಚಾರದಲ್ಲಿ ಸಕ್ರಿಯರಾಗಿದ್ದ ವಿರೋಧ ಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF)ನ ಮಹಿಳಾ ಅಭ್ಯರ್ಥಿಯೊಬ್ಬರು ಮೃತಪಟ್ಟ ಘಟನೆ ಉತ್ತರ ಕೇರಳ ಜಿಲ್ಲೆಯಲ್ಲಿ ನಡೆದಿದೆ.

ಮೂತೇಡಂ ಗ್ರಾಮ ಪಂಚಾಯತ್‌ನ ಪಯಿಂಪಡಂನ 7 ನೇ ವಾರ್ಡ್ ಅಭ್ಯರ್ಥಿಯಾಗಿದ್ದ ವಟ್ಟತ್ ಹಸೀನಾ ಮೃತ ದುರ್ದೈವಿ.
ಭಾನುವಾರವೂ ಮನೆ ಮನೆಗೆ ತೆರಳಿ ಪ್ರಚಾರ ಮಾಡಿ ಮನೆಗೆ ಮರಳಿದ ನಂತರ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಮೊದಲ ಹಂತದ ಮತದಾನ ಡಿಸೆಂಬರ್ 09 ರಂದು ಮಂಗಳವಾರ ನಡೆಯಲಿದೆ. ಡಿಸೆಂಬರ್ 11 ರಂದು ಮಲಪ್ಪುರಂನಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದೆ.




