’ನನ್ನ ಪತಿ ಜೈಲಿನಲ್ಲಿ ಯಾರಿಗೂ ಹಲ್ಲೆ ಮಾಡಿಲ್ಲ’– ದರ್ಶನ್ ಮೇಲಿರುವ ಆರೋಪಕ್ಕೆ ಪತ್ನಿ ಸ್ಪಷ್ಟನೆ

Share with

ಬೆಂಗಳೂರು: ದರ್ಶನ್ ಅಭಿನಯದ ‘ದಿ ಡೆವಿಲ್’ ರಿಲೀಸ್‌ಗೆ ಕ್ಷಣಗಣನೆ ಬಾಕಿ ಉಳಿದಿದೆ. ಸಿನಿಮಾ ರಿಲೀಸ್‌ಗೆ ಕೆಲವೇ ದಿನಗಳು ಇರುವಾಗಲೇ ಇತ್ತೀಚೆಗೆ ದರ್ಶನ್ ಮೇಲೆ ಒಂದು ಗಂಭೀರ ಆರೋಪ ಕೇಳಿ ಬಂದಿತ್ತು.

ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲಿನಲ್ಲಿರುವ ದರ್ಶನ್ ಜೈಲಿನಲ್ಲಿ ಸಹ ಕೈದಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಈ ಆರೋಪ ಸಂಚಲನ ಸೃಷ್ಟಿಸಿತ್ತು.

ಜೈಲಿನಲ್ಲಿದ್ರೂ ದರ್ಶನ್ ಅವರು ಬದಲಾಗಲಿಲ್ಲ ಎನ್ನುವ ಮಾತುಗಳು ಕೇಳಿ ಬಂದಿತ್ತು. ಇದೀಗ ಈ ಬಗ್ಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರೇ ಸ್ಪಷ್ಟನೆ ನೀಡಿದ್ದಾರೆ.

ದರ್ಶನ್ ಆರೋಪಗಳ ಹಿಂದಿನ ಸತ್ಯಾಸತ್ಯತೆಯನ್ನು ತಿಳಿಯಲು ಸ್ವತಃ ದರ್ಶನ್ ಪತ್ನಿಯೇ ಜೈಲಿಗೆ ಭೇಟಿ ನೀಡಿ, ಅಧಿಕಾರಿಗಳ ಜತೆ ಮಾತನಾಡಿದ್ದು, ಆ ಬಳಿಕ ಸ್ಪಷ್ಟನೆ ನೀಡಿದ್ದಾರೆ.

ದರ್ಶನ್ ಜೈಲಲ್ಲಿ ಯಾರ ಮೇಲೆಯೂ ಹಲ್ಲೆ ಮಾಡಿಲ್ಲ. ನಾನು ಖುದ್ದಾಗಿ ಜೈಲಿಗೆ ಭೇಟಿ ಮಾಡಿ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅವರ ಮೇಲಿನ ಆರೋಪಗಳೆಲ್ಲ ಉದ್ದೇಶಪೂರ್ವಕವಾಗಿ ಮಾಡಲಾಗಿದೆ’ ಎಂದು ವಿಜಯಲಕ್ಷ್ಮಿ ಅವರು ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.


Share with

Leave a Reply

Your email address will not be published. Required fields are marked *