ಹಾವೇರಿ: ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನಿಗೆ ವಿದ್ಯಾರ್ಥಿನಿಯರ ಪೋಷಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹಾವೇರಿ ಜಿಲ್ಲೆಯ ಸವಣೂರಿನಲ್ಲಿ ಬುಧವಾರ (ಡಿ.10) ನಡೆದಿದೆ.

ಸವಣೂರಿನ ಸರಕಾರಿ ಉರ್ದು ಶಾಲೆಯ ಶಿಕ್ಷಕನಾಗಿರುವ ಜಗದೀಶ್ ಕಿರುಕುಳ ನೀಡಿರುವ ಆರೋಪಿ.
ಶಿಕ್ಷಕ ಜಗದೀಶ್ ಶಾಲೆಯಲ್ಲಿ ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳನ್ನ ಮುಟ್ಟಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ ಅದರಂತೆ ಇಂದು ವಿದ್ಯಾರ್ಥಿನಿಯರ ಪೋಷಕರು ಶಾಲೆಗೆ ಭೇಟಿ ನೀಡಿ ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಬಳಿಕ ಹಿಗ್ಗಾಮುಗ್ಗಾ ಥಳಿಸಿದ್ದಾರೆ, ಬಳಿಕ ಕುತ್ತಿಗೆಗೆ ಚಪ್ಪಲಿ ಹಾರ ಹಾಕಿ ಶಾಲೆಯಿಂದ ಪೊಲೀಸ್ ಠಾಣೆಯ ವರೆಗೂ ಮೆರವಣಿಗೆ ಮಾಡಿದ್ದಾರೆ.




