ಸರ್ಕಾರಿ ಇಲಾಖೆಗಳಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು, 24,300 ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆ ಅನುಮತಿ ನೀಡಿದೆ ಎಂದು CM ಸಿದ್ದರಾಮಯ್ಯ ವಿಧಾನಸಭೆಗೆ ತಿಳಿಸಿದ್ದಾರೆ.

MLA ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನೆಗೆ CM ಲಿಖಿತ ಉತ್ತರ ನೀಡಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಯತ್ನಾಳ್, ‘ಅರ್ಹರಿಗೆ ಉದ್ಯೋಗ ನೀಡಬೇಕಿದ್ದ ಸರ್ಕಾರ ವೋಟ್ ಬ್ಯಾಂಕ್’ಗೆ ಹಣ ಬಳಸಿ ಉದ್ಯೋಗಾಂಕ್ಷಿಗಳಿಗೆ ನಿರಾಸೆ ಮೂಡಿಸಿದೆ. ಶಿಕ್ಷಣ ಇಲಾಖೆಯೊಂದರಲ್ಲೇ 79694 ಹುದ್ದೆಗಳು ಖಾಲಿ ಇವೆ’ ಎಂದಿದ್ದಾರೆ.




