ರಾಜ್ಯದಲ್ಲಿ ಚಳಿ ಅಬ್ಬರ; ಕನಿಷ್ಠ ತಾಪಮಾನಕ್ಕೆ ನಲುಗಿದ ಬೆಂಗಳೂರು

Share with

ಬೆಂಗಳೂರು, ಡಿಸೆಂಬರ್ 14: ನಗರದಲ್ಲಿ ಮೈ ಕೊರೆಯುವ ಚಳಿ ಮುಂದುವರಿದಿದ್ದು, ಜನ ಜೀವನದ ಮೇಲೆ ಪರಿಣಾಮ ಬೀರಿದೆ. ಕನಿಷ್ಠ ತಾಪಮಾನವು 14 ರಿಂದ 15 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ. ವಿಶೇಷವಾಗಿ ಹೆಚ್‌ಎಎಲ್ ವ್ಯಾಪ್ತಿಯಲ್ಲಿ ನಿನ್ನೆ 13 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಚಳಿ ಹಾಗೂ ಶೀತಗಾಳಿಯಿಂದಾಗಿ ಬೆಳಗ್ಗೆ ವಾಕಿಂಗ್‌ಗೆ ಹೋಗಲು ಸಹ ಜನರು ಹಿಂದೇಟು ಹಾಕುತ್ತಿದ್ದಾರೆ. ಡಿಸೆಂಬರ್ 14, 15 ಮತ್ತು 16ರಂದು ರಾಜ್ಯಾದ್ಯಂತ ಇದೇ ರೀತಿಯ ಚಳಿ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 9 ರಿಂದ 11 ಡಿಗ್ರಿ ಸೆಂಟಿಗ್ರೇಡ್ ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಸುಮಾರು 12 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ಇರಲಿದೆ.


Share with

Leave a Reply

Your email address will not be published. Required fields are marked *