ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಸಿದ್ದ ಬೊಂಡಿ ಬೀಚ್‌ನಲ್ಲಿ ಭಾನುವಾರ ಸಂಜೆ ನಡೆದಸಾಮೂಹಿಕ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಮೃತರಲ್ಲಿ ಮಕ್ಕಳು ಮಹಿಳೆಯರು ಸೇರಿದ್ದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹನುಕ್ಕಾ ಹಬ್ಬದ ಆಚರಣೆಗಾಗಿ ಬೀಚ್ ಬದಿ ನೂರಾರು ಯಹೂದಿ ಸಮುದಾಯದವರು ಜಮಾಯಿಸಿದ್ದರು ಈ ಸಮುದಾಯವನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಬ್ಬರು ಬಂದೂಕುಧಾರಿಗಳು ಕಡಲತೀರದ ಬಳಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ ಪರಿಣಾಮ ಅಮಾಯಕರು ಬಲಿಯಾಗಿದ್ದು ಇನ್ನೂ ಕೆಲವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಬ್ಬರು ದಾಳಿಕೋರರಲ್ಲಿ ಒಬ್ಬನನ್ನು ಸ್ಥಳದಲ್ಲೇ ಪೊಲೀಸರು ಗುಂಡಿಕ್ಕಿ ಕೊಂದಿದ್ದು. ಇನ್ನೊಬ್ಬ ದಾಳಿಕೋರನಿಗೆ ಗ, ಗಂಭೀರ ಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚೇತರಿಸಿಕೊಳ್ಳುತ್ತಿದ್ದಾನೆ. ಇಬ್ಬರೂ ದಾಳಿಕೋರರು ತಂದೆ-ಮಗ ಎಂದು ಗುರುತಿಸಲಾಗಿದೆ.




