ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯ ವಿಚಾರ ಬಿಸಿ ಬಿಸಿಯಾಗಿ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತೊಮ್ಮೆ ಪ್ರತಿಕ್ರಿಯೆ ನೀಡಿದ್ದಾರೆ.

ಮೊಟ್ಟೆಯಲ್ಲಿ ಕ್ಯಾನ್ಸರ್ ಉಂಟು ಮಾಡುವ ಅಂಶಗಳು ಕಂಡುಬಂದಿವೆ ಎಂಬುದಾಗಿ ಹಬ್ಬಿರುವ ವದಂತಿಗೆ ಜನರು ಭಯಪಡುವ ಅಗತ್ಯ ಇಲ್ಲ. ಮೊಟ್ಟೆಗಳ ಬಗೆಗೆ ಉಂಟಾಗಿರುವ ಸಂಶಯಕ್ಕೆ ಅನುಸಾರವಾಗಿ ಪರೀಕ್ಷೆ ನಡೆಸಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ, ಸಂಬಂಧಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.




