ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಪಡುಪೆರಾರ ಗ್ರಾಮವನ್ನು ಜಿಲ್ಲಾ ಆರೋಗ್ಯ ಇಲಾಖೆಯ ತಂಬಾಕು ಮುಕ್ತ ಯೋಜನೆಯಡಿ ತಂಬಾಕು ಮುಕ್ತ ಗ್ರಾಮವೆಂದು ಘೋಷಿಸಲಾಗಿದೆ.

ಜಿಲ್ಲಾ ತಂಬಾಕು ನಿಯಂತ್ರಣ ಅಧಿಕಾರಿ ಡಾ. ನವೀನ್ ಚಂದ್ರ ಕುಲಾಲ್ ಅವರು ತಂಬಾಕು ಉತ್ಪನ್ನಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವ ಮೂಲಕ ಮನ್ನಣೆ ಪಡೆದ ಜಿಲ್ಲೆಯ ಮೊದಲ ಗ್ರಾಮ ಪಡುಪೆರಾರ್ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.
ಪಡುಪೆರಾರ್ ಗ್ರಾಮವು ಮಂಗಳೂರಿನ ಹೊರವಲಯದಲ್ಲಿರುವ ಬಜ್ಪೆಯಿಂದ ಸುಮಾರು 2 ಕಿಲೋಮೀಟರ್ ದೂರದಲ್ಲಿದೆ. ಸ್ಥಳೀಯ ಆಡಳಿತದ ಪ್ರಕಾರ ಸುಮಾರು 2225 ಕುಟುಂಬಗಳ ಜನಸಂಖ್ಯೆ ಹೊಂದಿದೆ. ಬೀಡಿ, ಸಿಗರೇಟ್, ಪಾನ್ ಮಸಾಲ ಮಾರಾಟ ಸೇರಿದಂತೆ ತಂಬಾಕು ಉತ್ಪನ್ನಗಳಿಂದ ದೂರವಿರಲು ಸ್ಥಳೀಯ ಅಧಿಕಾರಿಗಳು ಗ್ರಾಮಸ್ಥರು ಮತ್ತು ಅಂಗಡಿಯವರೊಂದಿಗೆ ಚರ್ಚೆ ನಡೆಸಿದರು. ಪಂಚಾಯತ್ ತಂಡವು ಅಂಗನವಾಡಿಗಳು ಮತ್ತು ಶಾಲೆಗಳಿಗೆ ಭೇಟಿ ನೀಡಿ, ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸಿತು.
ಪಡುಪೆರಾರ್‌ನಲ್ಲಿ 12 ಅಂಗಡಿಗಳಿವೆ, ಅವುಗಳು ಈ ಹಿಂದೆ ಈ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದವು. “ಕಳೆದ ಒಂದು ವರ್ಷದಿಂದ ನಾನು ಗ್ರಾಮವನ್ನು ತಂಬಾಕು ಮುಕ್ತಗೊಳಿಸಲು ಶ್ರಮಿಸುತ್ತಿದ್ದೇನೆ. ನಾನು ಮತ್ತು ಆರೋಗ್ಯ ಅಧಿಕಾರಿಗಳು ಈ ಅಂಗಡಿಗಳಿಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿದೆವು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಬೆಂಬಲದೊಂದಿಗೆ, ಪಂಚಾಯತ್ ಸದಸ್ಯರು, ಗ್ರಾಮಸ್ಥರು, ಮಹಿಳಾ ಸ್ವಸಹಾಯ ಗುಂಪುಗಳು ಮತ್ತು ಯುವ ವೇದಿಕೆಗಳು ಸೇರಿದಂತೆ ಎಲ್ಲಾ ಸಂಸ್ಥೆಗಳ ಜೊತೆ ಸಭೆ ನಡೆಸಿದ್ದೇವೆ.




