ರಾಜ್ಯದಲ್ಲಿ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್‌ಗಾಗಿ ಬಂದ 3.96 ಲಕ್ಷ ಅರ್ಜಿಗಳಲ್ಲಿ 2.95 ಲಕ್ಷ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಉಳಿದ ಅರ್ಜಿಗಳನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.

ಈ ಮೂಲಕ ಕಳೆದೆರಡು ವರ್ಷಗಳಿಂದ ರೇಷನ್ ಕಾರ್ಡ್‌ಗೆ ಅರ್ಜಿ ಹಾಕಿ ಕಾಯುತ್ತಿದ್ದವರಿಗೆ ಗುಡ್‌ನ್ಯೂಸ್ ಸಿಕ್ಕಂತಾಗಿದೆ. ತಾಲೂಕು ಕಚೇರಿಯ ಆಹಾರ ಇಲಾಖೆ ಅಧಿಕಾರಿಗಳು ಜಿಲ್ಲಾ ಕೇಂದ್ರ/ ನಗರ ವ್ಯಾಪ್ತಿಯಲ್ಲಿ ಆಹಾರ ಇಲಾಖೆ ಉಪ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಅರ್ಜಿ ಅನುಮೋದನೆಯಾಗಿದೆಯೇ ಅಥವಾ ಇಲ್ಲವೇ ಎಂದು ಖಚಿತಪಡಿಸಿಕೊಳ್ಳಬೇಕು. ಆ ಬಳಿಕ ಅಗತ್ಯವಿದ್ದರೆ ದಾಖಲಾತಿ ಪರಿಶೀಲನೆಗೆ ನೀಡಿ ಸ್ಥಳದಲ್ಲಿಯೇ ರೇಷನ್ ಕಾರ್ಡ್ ಪಡೆಯಬಹುದು ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಒಂದು ತಿಂಗಳಲ್ಲಿ ಪ್ರಕ್ರಿಯೆ ಪೂರ್ಣ
ಸುವರ್ಣ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಹೊಸದಾಗಿ ಬಿಪಿಎಲ್ ಕಾರ್ಡ್ ಪಡೆಯಲು ಒಟ್ಟು 3.96 ಲಕ್ಷ ಅರ್ಜಿಗಳು ಬಂದಿದ್ದವು. ಈ ಪೈಕಿ 2.95 ಲಕ್ಷ ಅರ್ಜಿಗಳನ್ನು ಈಗಾಗಲೇ ವಿಲೇವಾರಿ ಮಾಡಲಾಗಿದೆ. ಉಳಿದ ಅರ್ಜಿಗಳನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಎಪಿಎಲ್‌ಗೆ ಬದಲಾವಣೆ ಮಾಡಿ ಅರ್ಹ ಫಲಾನುಭವಿಗಳಿಗೆ ಕಾರ್ಡ್‌ಗಳನ್ನು ವಿತರಿಸುವ ಕಾರ್ಯ ಮುಂದುವರಿದಿದೆ ಎಂದು ಹೇಳಿದರು.




