ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಉಡುಪಿಯ 3 ಆಸ್ಪತ್ರೆ ಸಹಿತ 270 ಆಸ್ಪತ್ರೆ ನೋಂದಣಿ: ಸಿಎಂ

Share with

ಬೆಳಗಾವಿ: ರಾಜ್ಯ ಸರಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲು ಜಾರಿಗೊಳಿಸಿರುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ ಉಡುಪಿ ಜಿಲ್ಲೆಯ 3 ಆಸ್ಪತ್ರೆಗಳು ಸೇರಿದಂತೆ ರಾಜ್ಯದ 270 ಆಸ್ಪತ್ರೆಗಳು ನೊಂದಾಯಿಸಲ್ಪಟ್ಟಿವೆ ಎಂದು ಮುಖ್ಯಮಂತ್ರಿ ಎಸ್‌. ಸಿದ್ದರಾಮಯ್ಯ ಅವರು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ್ದಾರೆ.

2025ರಲ್ಲಿ ಅಕ್ಟೋಬರ್ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಯೋಜನೆಗೆ ಒಳಪಡಲು ಇಚ್ಛಿಸುವ ಖಾಸಗಿ ಆಸ್ಪತ್ರೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಅವುಗಳನ್ನು ನೊಂದಾಯಿಸಿ ಅಧಿಸೂಚಿಸುವ ಕಾರ್ಯವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೈಗೊಳ್ಳಲಾಗುತ್ತಿದೆ ಎಂದರು.


Share with

Leave a Reply

Your email address will not be published. Required fields are marked *