ಮುದ್ದು ಮಕ್ಕಳ (little kids) ಆಟ-ತುಂಟಾಟಗಳನ್ನು ನೋಡುವುದೇ ಚಂದ. ಪುಟಾಣಿಗಳ ಬಾಯಲ್ಲಿ ತೊದಲು ನುಡಿ, ಹಾಡುಗಳನ್ನು ಕೇಳಿದರೆ ಮನಸ್ಸಿನ ನೋವೆಲ್ಲಾ ಮರೆಯಾಗುತ್ತದೆ. ಈ ಪುಟಾಣಿಗಳ ಮುದ್ದು ಮುದ್ದಾದ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಪುಟಾಣಿಯೊಂದು ಅಚ್ಯುತಂ ಕೇಶವಂ ಕೃಷ್ಣ ದಾಮೋದರಂ ಸ್ತೋತ್ರವನ್ನು ಭಕ್ತಿಭಾವದಿಂದ ಹಾಡಿದೆ. ಮುದ್ದು ಕಂದನ ಕಂಠಸಿರಿಯಲ್ಲಿ ಮೂಡಿಬಂದ ಈ ಭಜನಾ ಹಾಡಿಗೆ ನೆಟ್ಟಿಗರು ಮನಸೋತಿದ್ದಾರೆ.
ಮಣಿಕರ್ಣಿಕ ಕಟೋಚ್ (Manikarnika Katoch) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಪುಟಾಣಿಯೊಂದು ದೇವರ ಕೋಣೆಯಲ್ಲಿ ಕುಳಿತುಕೊಂಡು ಕೈಯಲ್ಲಿ ಪೂಜಾ ತಟ್ಟೆ ಹಿಡಿದುಕೊಂಡು ಭಜನೆಯಲ್ಲಿ ಮುಳುಗಿದೆ. ಈ ಪುಟಾಣಿಯೂ “ಅಚ್ಯುತಂ ಕೇಶವಂ” ಎಂಬ ಪ್ರಸಿದ್ಧ ಸ್ತೋತ್ರವನ್ನು ಹಾಡುತ್ತಿರುವುದನ್ನು ಕಾಣಬಹುದು.
ವೈರಲ್ ವಿಡಿಯೋ ಇಲ್ಲಿದೆ

ಈ ವಿಡಿಯೋ 6 ಮಿಲಿಯನ್ ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಮತ್ತೆ ಮತ್ತೆ ನೋಡಬೇಕೇನಿಸುವ ದೃಶ್ಯ ಎಂದಿದ್ದಾರೆ. ಇನ್ನೊಬ್ಬರು, ವಿಡಿಯೋ ನನ್ನ ಹೃದಯ ಗೆದ್ದಿದೆ” ಎಂದು ಹೇಳಿದ್ದಾರೆ. ಮತ್ತೊಬ್ಬರು ಅಪ್ಪಟ ಕೃಷ್ಣ ಭಕ್ತ ಎಂದು ಕಾಮೆಂಟ್ ಮಾಡಿದ್ದಾರೆ.




