ವರದಕ್ಷಿಣೆ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಎರಡು ತಿಂಗಳ ಹಿಂದೆ ವಿವಾಹವಾಗಿದ್ದ ನವವಿವಾಹಿತೆ ಗಾನವಿ (26) ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಬೆಂಗಳೂರಿನ ರಾಮಮೂರ್ತಿ ನಗರದಲ್ಲಿದ್ದ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು.

ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆ ಪೊಲೀಸರು ಗಾನವಿಯ ಪತಿ ಸೂರಜ್ ಅನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.




