ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದೆ. ದೆವ್ವ ಹಿಡಿದಿದೆ ಅಂತ ಮಹಿಳೆಯನ್ನು ಬೇವಿನ ಕಟ್ಟಿಗೆಯಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಈ ಘಟನೆ ಮಹಾರಾಷ್ಟ್ರದ ಮುರುಮ್ ಗ್ರಾಮದಲ್ಲಿ ನಡೆದಿದೆ.

ಕಲಬುರ್ಗಿಯ ಆಳಂದದ ನಿವಾಸಿ ಮುಕ್ತಬಾಯಿ(38) ಹತ್ಯೆಯಾದ ಮಹಿಳೆ. ಈಕೆಗೆ ದೆವ್ವ ಹಿಡಿದಿದೆ. ಅದನ್ನ ಬಿಡಿಸುತ್ತೇವೆ ಎಂದು ಬೇವಿನ ಕಟ್ಟಿಗೆಯಿಂದ ತೀವ್ರವಾಗಿ ಹಲ್ಲೆ ಮಾಡಲಾಗಿತ್ತು. ಗಂಭೀರ ಗಾಯಗೊಂಡಿದ್ದ ಮುಕ್ತಬಾಯಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.




