PM KISAN ಯೋಜನೆಯಡಿ, ಕೇಂದ್ರ ಸರ್ಕಾರ ಸಣ್ಣ ಹಾಗೂ ಬಡ ರೈತರಿಗೆ ವರ್ಷಕ್ಕೆ 3 ಕಂತುಗಳಲ್ಲಿ ತಲಾ ₹2,000 ನೀಡುತ್ತಿದೆ. ಈ ಮೊತ್ತವನ್ನು ಹೆಚ್ಚಿಸಬೇಕೆಂದು ರೈತ ಸಂಘಟನೆಗಳು ಒತ್ತಾಯಿಸುತ್ತಿವೆ.

ಈ ಹಿನ್ನೆಲೆಯಲ್ಲಿ, ಪಿಎಂ ಕಿಸಾನ್ ಯೋಜನೆಯ ಕಂತಿನ ಮೊತ್ತವನ್ನು ₹3,000ಕ್ಕೆ ಏರಿಸಲು ಸರ್ಕಾರ ಯೋಜಿಸುತ್ತಿದೆ ಎಂಬ ಖುಷಿ ಸುದ್ದಿ ಹೊರಬಿದ್ದಿದೆ. ಫೆಬ್ರವರಿಯಲ್ಲಿ ಮಂಡಿಸಲಿರುವ ಕೇಂದ್ರ ಬಜೆಟ್ನಲ್ಲಿ ಈ ಕುರಿತು ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.




