ದಾವಣಗೆರೆ ಜಿಲ್ಲೆಯಲ್ಲಿನ ಡ್ರಗ್ಸ್ ಕೇಸ್‌ನಲ್ಲಿ ಕಾಂಗ್ರೆಸ್ ಘಟಾನುಘಟಿಗಳ ಬಂಧನ ಮುಂದುವರೆದಿದೆ. ಇದೀಗ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಅನ್ವರ್ ಬಾಷಾನನ್ನು ಬಂಧಿಸಲಾಗಿದೆ. ಇದರೊಂದಿಗೆ ಸಿಂಥೆಟಿಕ್ ಡ್ರಗ್ಸ್ ಕೇಸ್‌ನಲ್ಲಿ ಬಂಧಿಸಲ್ಪಟ್ಟ ಆರೋಪಿಗಳ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಡಿಸೆಂಬರ್.23ರಂದು ಡ್ರಗ್ಸ್ ದಂಧೆ ನಡೆಸಿದ್ದ ಗ್ಯಾಂಗ್ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಕಾಂಗ್ರೆಸ್ ಮುಖಂಡ ವೇದಮೂರ್ತಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.




