ಹೊಸ ವರ್ಷಕ್ಕೆ ಮಥುರಾದಲ್ಲಿ ಸನ್ನಿ ಲಿಯೋನ್ ಡ್ಯಾನ್ಸ್..; ಆಕ್ರೋಶ ಬೆನ್ನಲ್ಲೇ ಕಾರ್ಯಕ್ರಮ ರದ್ದು

Share with

ಲಕ್ನೋ: ಬಾಲಿವುಡ್ ನಟಿ ಸನ್ನಿ ಲಿಯೋನ್ ಸಾಧು ಸಂತರ ಕೆಂಗೆಣ್ಣಿಗೆ ಗುರಿಯಾಗಿದ್ದಾರೆ.

ತನ್ನ ಮೋಹಕ ನೋಟ, ಮಾದಕತೆಯಿಂದಲೇ ಬಾಲಿವುಡ್‌ನಲ್ಲಿ ಮೋಡಿ ಮಾಡಿ, ಅಪಾರ ಪಡ್ಡೆ ಹೈಕಳ ನಿದ್ದೆಗೆಡಿಸಿರುವ ನಟಿ ಸನ್ನಿ ಲಿಯೋನ್ ನ್ಯೂ ಇಯರ್ ಸಂಭ್ರಮಕ್ಕೆ ಹೆಜ್ಜೆ ಹಾಕಲು ಸಜ್ಜಾಗಿದ್ದಾರೆ ಎಂದು ವರದಿಯಾಗಿತ್ತು.

ಉತ್ತರ ಪ್ರದೇಶದ ಮಥುರಾದಲ್ಲಿ ನ್ಯೂ ಇಯರ್‌ಗಾಗಿ ಹಲವು ಕಾರ್ಯಕ್ರಮಗಳು ನಡೆಯಲಿದೆ. ಶ್ರೀಕೃಷ್ಣ ಜನ್ಮಭೂಮಿಯಲ್ಲಿ ಮಥುರಾದಲ್ಲಿ ಹೊಸ ವರ್ಷದ ಕಾರ್ಯಕ್ರಮಕ್ಕೆ ನಟಿ ಸನ್ನಿ ಲಿಯೋನ್ ಅವರಿಗೆ ಆಹ್ವಾನ ನೀಡಲಾಗಿತ್ತು.

ಮಥುರಾದ ಹೋಟೆಲ್ ಲಲಿತಾ ಗೌಂಡ್ ಮತ್ತು ಹೋಟೆಲ್ ಟಾ ಟ್ರಕ್‌ನಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸನ್ನಿ ಲಿಯೋನ್ ಅವರು ಹೆಜ್ಜೆ ಹಾಕಲಿದ್ದಾರೆ. ಆದರೆ ಈ ಕಾರ್ಯಕ್ರಮಕ್ಕೆ ಬಲಪಂಥೀಯ ವರ್ಗ ಹಾಗೂ ಸಾಧು ಸಂತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಕಾರ್ಯಕ್ರಮವನ್ನು ಈ ಕೂಡಲೇ ರದ್ದುಗೊಳಿಸಬೇಕೆಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಪತ್ರವನ್ನು ಬರೆದು ಆಗ್ರಹಿಸಲಾಗಿತ್ತು.

ಆಕ್ರೋಶದ ಬೆನ್ನಲ್ಲೇ ಇದೀಗ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ.

“ಸನ್ನಿ ಲಿಯೋನ್ ಅವರು ಡಿಜೆ ಆಗಿ ಕಾಣಿಸಿಕೊಳ್ಳಲಿದ್ದರು. ಅವರು ಡ್ಯಾನ್ಸರ್ ಆಗಿ ಕಾಣಿಸಿಕೊಳ್ಳುತ್ತಿಲ್ಲ ಎಂದು ಹೋಟೆಲ್ ಮಾಲೀಕ ಮಿತುಲ್ ಪಾಠಕ್ ಹೇಳಿದ್ದಾರೆ.

ಇದರ ಹೊರತಾಗಿಯೂ, ಸಾಮಾಜಿಕ ಮತ್ತು ಧಾರ್ಮಿಕ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ನಾವು ಕಾರ್ಯಕ್ರಮವನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ” ಎಂದು ಪಾಠಕ್ ‘ಟೈಮ್ಸ್ ಆಫ್ ಇಂಡಿಯಾ’ಕ್ಕೆ ತಿಳಿಸಿದ್ದಾರೆ.

ತೀವ್ರ ಆಕ್ರೋಶ:

ಶ್ರೀಕೃಷ್ಣನ ಜನ್ಮಭೂಮಿಯಲ್ಲಿ ಸನ್ನಿ ಲಿಯೋನ್ ಅವರ ಕಾರ್ಯಕ್ರಮವನ್ನು ಆಯೋಜಿಸಿರುವವರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.

ಈ ಧರ್ಮಕ್ಷೇತ್ರವನ್ನು ಸನ್ನಿ ಲಿಯೋನ್ ಅವರ ಅಸಭ್ಯ ಮತ್ತು ಅಶ್ಲೀಲ ಕಾರ್ಯಕ್ರಮದ ಮೂಲಕ ಕಳಂಕಿತಗೊಳಿಸಲು ನಾವು ಬಿಡುವುದಿಲ್ಲ ಎಂದು ಅರ್ಜಿದಾರರಾದ ದಿನೇಶ್ ಫಲಾಹಾರಿ ಮಹಾರಾಜ್ ಹೇಳಿದ್ದರು.

ಛೋಟೆ ಪುಂಡರೀಕ್ ಮಹಾರಾಜ್ ಕೂಡ ಸನ್ನಿ ಲಿಯೋನ್ ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ಧ ಕಿಡಿ ಕಾರಿದ್ದು ಧಾರ್ಮಿಕ ಭಾವನೆಗಳನ್ನು ಪ್ರಚೋದಿಸಲು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಸಂಚು ರೂಪಿಸಲಾಗುತ್ತಿದೆ ಎಂದು ಹೇಳಿದ್ದರು.


Share with

Leave a Reply

Your email address will not be published. Required fields are marked *