ನಾಳೆ, ನಾಡಿದ್ದು ತೀವ್ರ ಚಳಿಯ ಎಚ್ಚರಿಕೆ

Share with

ರಾಜ್ಯದಲ್ಲಿ ಈ ಬಾರಿ ತೀವ್ರ ಚಳಿ ದಾಖಲಾಗಿದ್ದು, ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ದಾವಣಗೆರೆ, ಚಿತ್ರದುರ್ಗ ಭಾಗಗಳಲ್ಲಿ ಕನಿಷ್ಠ ತಾಪಮಾನ 10-11 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬೀದ‌ರ್, ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 1-3 ಡಿಗ್ರಿವರೆಗೆ ಕಡಿಮೆಯಾಗಿದೆ. ಬೆಳಗ್ಗೆ & ರಾತ್ರಿ ಸಮಯದಲ್ಲಿ ಚಳಿ ಹೆಚ್ಚಾಗುತ್ತಿದ್ದು, ಮಂಜಿನ ವಾತಾವರಣವೂ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿದೆ.


Share with

Leave a Reply

Your email address will not be published. Required fields are marked *