ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ

Share with

ರಾಜ್ಯದಲ್ಲಿ ಭಾಗ್ಯಗಳ ಸಾಲಿಗೆ ಮತ್ತೊಂದು ಭಾಗ್ಯ ಸೇರಿದೆ. ರಾಜ್ಯದಲ್ಲಿ ಜೀವಾವಧಿ ಕೈದಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 33 ಕೈದಿಗಳಿಗೆ ಈ ಸಿಹಿ ಸುದ್ದಿ ಅನ್ವಯವಾಗಲಿದೆ.

Pಸನ್ನಡತೆ ಆಧಾರದಲ್ಲಿ 33 ಕೈದಿಗಳನ್ನು ಬಿಡುಗಡೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಸಚಿವ ಸಂಪುಟ ಸಭೆ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಈ ಮಾಹಿತಿ ನೀಡಿದ್ದಾರೆ. ಸರ್ಕಾರದ ಈ ನಿರ್ಧಾರದಿಂದ ಕೈದಿಗಳ ಕುಟುಂಬದಲ್ಲಿ ಸಂತಸ ಮನೆಮಾಡಿದೆ.


Share with

Leave a Reply

Your email address will not be published. Required fields are marked *