ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಬೆಂಕಿ ಹೊತ್ತಿಕೊಂಡು ಲಾರಿಯೊಂದು ಸುಟ್ಟು ಕರಕಲಾದ ಘಟನೆ ಶನಿವಾರ ನಸುಕಿನ 3 ಗಂಟೆ ಸುಮಾರಿಗೆ ನಡೆದಿದೆ.

ಅದೃಷ್ಟವಶಾತ್ ಚಾಲಕ ಸಹಿತ ಲಾರಿಯಲ್ಲಿದ್ದ ಮೂರು ಮಂದಿ ಅಪಾಯದಿಂದ ಪಾರಾಗಿದ್ದಾರೆ. ಜಾವಗಲ್ ನಿಂದ ಕುಂದಾಪುರದ ಕಡೆಗೆ ಲಾರಿಯಲ್ಲಿ ಮೆಕ್ಕೆಜೋಳದ ಲೋಡ್ ಕೊಂಡೊಯ್ಯಲಾಗುತ್ತಿತ್ತು ಎಂದು ತಿಳಿದು ಬಂದಿದೆ.
ಬೆಂಕಿ ರಸ್ತೆ ಬದಿಯ ಅರಣ್ಯಕ್ಕೂ ವ್ಯಾಪಿಸಿದ್ದು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ, ಸ್ಥಳೀಯರ ಸಕಾಲಿಕ ಕ್ರಮದಿಂದ ಹತೋಟಿಗೆ ತರಲಾಗಿದೆ.




