ಪ್ರೀತಿಸುವಂತೆ ಕಾಟ: ಜೆಡಿಎಸ್‌ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ

Share with

ಕಾರವಾರ, ಜನವರಿ 10: ಜೆಡಿಎಸ್‌ (JDS) ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಮನನೊಂದು ಯುವತಿ ಆತ್ಮಹತ್ಯೆ (Suicide) ಮಾಡಿಕೊಂಡಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾ ಗ್ರಾಮದಲ್ಲಿ ನಡೆದಿದೆ. ರಿಶಾಲ್‌ ಡಿಸೋಜಾ‌(20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಚೈತ್ರಾ ಕೋಠಾರಕರ ಪುತ್ರ ಚಿರಾಗ್ ಪ್ರೀತಿಸುವಂತೆ ಪೀಡಿಸುತ್ತಿದ್ದ ಆರೋಪ ಕೇಳಿಬಂದಿದೆ. ಸದ್ಯ ಕದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೀತಿಸುವಂತೆ ಕಾಟ
ಚೈತ್ರಾ ಕೋಠಾರಕರ ಪುತ್ರ ಚಿರಾಗ್, ಕದ್ರಾ ಗ್ರಾಮದ ಕೆಪಿಸಿಎಲ್ ಕಾಲೋನಿ ನಿವಾಸಿ ರಿಶಾಲ್‌ ಡಿಸೋಜಾ‌ಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ. ಕಳೆದ ಕೆಲ ದಿನಗಳಿಂದ ಯುವತಿ ಮನೆ ಬಳಿ ಬಂದು ಹೋಗುತ್ತಿದ್ದ. ಪ್ರೀತಿ ನಿರಾಕರಿಸಿದ್ದಕ್ಕೆ ಬೇಗ ಸತ್ತು ಹೋಗು ಎಂದು ಚಿರಾಗ್‌ ಹೇಳಿದ್ದ. ಇದರಿಂದ ನೊಂದ ರಿಶಾಲ್‌ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. ಸದ್ಯ ರಿಶಾಲ್‌ ತಂದೆ ಕ್ರಿಸ್ತೋದ್ ಫ್ರಾನ್ಸಿಸ್ ದೂರಿನ ಮೇರೆಗೆ ಚಿರಾಗ್ ವಿರುದ್ಧ ಕದ್ರಾ ಪೊಲೀಸರು ಮೊಕದ್ದಮೆ ದಾಖಲಿಸಿದ್ದಾರೆ.


Share with

Leave a Reply

Your email address will not be published. Required fields are marked *