ಗೋಡೆ ಒಡೆದು ಬ್ಯಾಂಕ್ ದರೋಡೆಗೆ ಯತ್ನ!

Share with

ಖದೀಮರು ಶೌಚಾಲಯದ ಗೋಡೆ ಕೊರೆದು ಬ್ಯಾಂಕ್‌ ದರೋಡೆಗೆ ಯತ್ನಿಸಿದ್ದಾರೆ. ಈ ಘಟನೆ ಉತ್ತರ ಕನ್ನಡದ ಅಂಕೋಲಾ ತಾಲೂಕಿನ ಸುಂಕಸಾಳ ಗ್ರಾಮದ ಬ್ಯಾಂಕ್‌ ಆಫ್‌ ಬರೋಡಾ ಶಾಖೆಯಲ್ಲಿ ನಡೆದಿದೆ.

ಬ್ಯಾಂಕ್ ನ ಸ್ಟ್ರಾಂಗ್ ರೂಮ್ ಗೋಡೆ ಒಡೆಯಲು ಯತ್ನಿಸಿದ ಕಳ್ಳರಿಂದ ಅದು ಸಾಧ್ಯವಾಗಲಿಲ್ಲ. ಹೀಗಾಗಿ ಕಳ್ಳರು ಖಾಲಿ ಕೈಯಲ್ಲಿ ಹಿಂತಿರುಗಿದ್ದಾರೆ. ಸ್ಥಳಕ್ಕೆ ಜಿಲ್ಲೆಯ SP ದೀಪನ್‌ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ದರೋಡೆ ಪ್ರಕರಣದ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


Share with

Leave a Reply

Your email address will not be published. Required fields are marked *