ಶಾಲೆಗೆ ತಪ್ಪದೆ ಹೋಗು ಎಂದಿದ್ದಕ್ಕೆ ಬಾಲಕ ಆತ್ಮಹತ್ಯೆ

Share with

ಶಾಲೆಗೆ ತಪ್ಪದೇ ಹೋಗು ಎಂದಿದ್ದಕ್ಕೆ 8ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿ ತಾ. ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಜಗದೀಶ್ (14) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಾಲಕ. ಶಾಲೆಗೆ ತಪ್ಪದೆ ಹೋಗು ಎಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಬಾಲಕ ಮನನೊಂದು, ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಈ ಕುರಿತು ಚಿಕ್ಕನಾಯಕನಹಳ್ಳಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Share with

Leave a Reply

Your email address will not be published. Required fields are marked *