ಬೆಂಗಳೂರು: ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸ್ವಾಗತಿಸುವ ವೇಳೆ ಸಿಡಿಸಿದ ಪಟಾಕಿಯ ಕಿಡಿ ತಗುಲಿ ಅಳವಡಿಸಿದ್ದ ಬ್ಯಾನರ್ ಹೊತ್ತಿ ಉರಿದಿರುವಂತಹ ಘಟನೆ ನಗರದ ಸಿಟಿ ಮಾರುಕಟ್ಟೆ ಠಾಣೆ ವ್ಯಾಪ್ತಿಯ ಬಳೇಪೇಟೆಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಸ್ಥಳೀಯ ನಿವಾಸಿಗಳು ಹಾಗೂ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿದ್ದು, ಅದೃಷ್ಟಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ನಡೆದದ್ದೇನು?: ಬಳೇಪೇಟೆಯಲ್ಲಿ ಸಂಕ್ರಾಂತಿ ಹಿನ್ನೆಲೆಯಲ್ಲಿ ಕಾರ್ಯಕ್ರಮಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಸಚಿವ ದಿನೇಶ್ ಗುಂಡೂರಾವ್ ಆಗಮಿಸಿದ್ದರು. ಸ್ಥಳೀಯರು ಪಟಾಕಿ ಹಚ್ಚುವ ಮೂಲಕ ಸ್ವಾಗತ ಕೋರಿದ್ದಾರೆ. ಈ ವೇಳೆ ಪ್ರವೇಶ ದ್ವಾರದ ಬಳಿ ಪಟಾಕಿ ಸಿಡಿದಿದ್ದು, ಆಗ ಪಟಾಕಿಯ ಕಿಡಿ ಬ್ಯಾನರ್ಗೆ ತಗುಲಿ ಹೊತ್ತಿ ಉರಿದಿದೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ಕೆ. ಆರ್.ಮಾರುಕಟ್ಟೆ ಠಾಣೆಯಲ್ಲಿ ದೂರು ದಾಖಲಾಗಿದೆ.




