ಪ್ರಧಾನಿ ಮೋದಿ ಅವರು ಗ್ರೀಸ್ನಿಂದ ಬೆಂಗಳೂರಿನ HAL ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ಮೋದಿ ಅವರನ್ನು ಸ್ವಾಗತಿಸಲು ರಾಜ್ಯ ಸರ್ಕಾರದ ಯಾವೊಬ್ಬ ಸಚಿವರು ವಿಮಾನ ನಿಲ್ದಾಣಕ್ಕೆ ಆಗಮಿಸಲಿಲ್ಲ. ಬದಲಾಗಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಹಾಗೂ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಮೋದಿ ಅವರನ್ನು ಸ್ವಾಗತಿಸಿದರು.