ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವಮಾರು ಗದ್ದೆಯಲ್ಲಿ 33 ನೇ ವರ್ಷದ ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳವು ಜ.24 ರಿಂದ ಪ್ರಾರಂಭಗೊಂಡು 25 ರವರೆಗೆ ನಡೆಯಲಿದ್ದು, ಜನಸಾಗರ ಹರಿದು ಬರುವ ನಿರೀಕ್ಷೆ ಇದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕಂಬಳ ನಡೆಯುವ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿಕೊಂಡು ಕಿರುಕುಳ ಉಂಟುಮಾಡುವುದನ್ನು ತಪ್ಪಿಸಲು ಪುತ್ತೂರು ನಗರದಲ್ಲಿರುವ ಎಲ್ಲಾ ಬಾರ್ ಮತ್ತು ವೈನ್‍ಶಾಪ್, ಮದ್ಯ ಅಂಗಡಿಗಳನ್ನು ಜನವರಿ 24 ರಂದು ಬೆಳಿಗ್ಗೆ 6 ಗಂಟೆಯಿಂದ 25 ರ ರಾತ್ರಿ 12 ಗಂಟೆಯವರೆಗೆ ಮುಚ್ಚಲು ಹಾಗೂ ಅಮಲು ಪದಾರ್ಥಗಳನ್ನು ಮಾರಾಟ ಮಾಡದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶ ನೀಡಿದ್ದಾರೆ.




