ಬಂಟ್ವಾಳ ಪೋಲೀಸ್ ಠಾಣೆಯಲ್ಲಿ ಸುಮಾರು 7 ವರ್ಷಗಿಂತಲೂ ಹೆಚ್ಚಿನ ಅವಧಿಯಿಂದ ಪೋಲೀಸ್ ಠಾಣೆಯ ಸದಸ್ಯರಾಗಿದ್ದು ರಾತ್ರಿ ಪಾಳಿಯಲ್ಲಿ ಕಾವಲುಗಾರನಂತೆ ಶಿಸ್ತಿನ ಕೆಲಸ ಮಾಡುತ್ತಿದ್ದ ಹೆಣ್ಣು ನಾಯಿ ಕಾರು ಅಪಘಾತದಲ್ಲಿ ಶನಿವಾರ ರಾತ್ರಿ ಸುಮಾರು 9 ಗಂಟೆ ವೇಳೆ ಠಾಣೆಯ ಅವರಣದಲ್ಲಿಯೇ ಸಾವನ್ನಪ್ಪಿದೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಠಾಣೆ ಕಾರಿನಲ್ಲಿ ಬಂದಿದ್ದ ವ್ಯಕ್ತಿ ತನ್ನ ಕೆಲಸ ಮುಗಿಸಿ ವಾಪಸು ಹೋಗುವ ವೇಳೆ ಕಾರನ್ನು ರಿವರ್ಸ್ ತೆಗೆಯುವಾಗ ಅಲ್ಲೇ ಮಲಗಿದ್ದ ನಾಯಿಯ ಮೇಲೆ ಆತನಿಗೆ ಗೊತ್ತಿಲ್ಲದೆ ಕಾರು ಹರಿದಿದೆ. ಗಂಭೀರವಾಗಿ ಗಾಯಗೊಂಡ ನಾಯಿ ಸ್ಥಳದಲ್ಲಿ ಯೇ ಸಾವನ್ನಪ್ಪಿದೆ