ತಂದೆಯೇ ಪುತ್ರಿಯನ್ನು ಕೊಲೆಗೈದ ಪ್ರಕರಣ; ಗಂಭೀರ ಸ್ಥಿತಿಯಲ್ಲಿದ್ದ ಮತ್ತೋರ್ವ ಸಾವು

Share with

ಮಂಜೇಶ್ವರ: ಮಂಜೇಶ್ವರ ತೂಮಿನಾಡುವಿನ ಹಿಲ್ ಟಾಪ್ ನಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿ ನಡೆದ ಕುಟುಂಬ ಕಲಹದಲ್ಲಿ ಕೊಲೆಗೀಡಾದವರ ಸಂಖ್ಯೆ ಎರಡಕ್ಕೇರಿದೆ.

ಮಾರಣಾಂತಿಕವಾಗಿ ಇರಿತಕ್ಕೆ ಒಳಗಾಗಿದ್ದ ಶೇಕುಂಞ ಎಂಬವರು ಇಂದು(ಫೆ.3) ಬೆಳಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರ ಪತ್ನಿಯ ಅಕ್ಕನ ಮಗಳು ಜುಮೈಲಾ(17) ಸೋಮವಾರ ಸಂಜೆ ಕೊಲೆಯಾಗಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶೇಕುಂಞ ಇದೀಗ ಕೊನೆಯುಸಿರೆಳೆದಿದ್ದಾರೆ. ಜುಲೈಲಾ ಅವರ ತಂದೆ ಉಮರ್ ಫಾರೂಕ್ ಕೊಲೆ ಆರೋಪಿಯಾಗಿದ್ದಾನೆ.

ಕುಟುಂಬ ಕಲಹ, ಆಸ್ತಿ ವಿಚಾರವಾಗಿ ಉಮರ್ ಫಾರೂಕ್ ಮತ್ತು ಆತನ ಪತ್ನಿಯ ತಂಗಿ(ನಾದಿನಿ)ಯ ಪತಿ ಶೇಕುಂಞ ಮಧ್ಯೆ ಈ ಮೊದಲೇ ವೈಮನಸ್ಸು ಇತ್ತೆನ್ನಲಾಗಿದೆ.

ಇದೇ ವಿಚಾರವಾಗಿ ಸೋಮವಾರ ಸಂಜೆ ಉಮರ್ ಫಾರೂಕ್ ಮತ್ತು ಶೇಕುಂಞ ಮಧ್ಯೆ ನಡೆದ ವಾಗ್ವಾದ ತಾರಕ್ಕೇರಿದೆ. ಈ ವೇಳೆ ಶೇಕುಂಳೆಯವರ ಮೇಲೆ ಆರೋಪಿ ಉಮರ್ ಫಾರೂಕ್ ಮಾರಕಾಸ್ತದಿಂದ ದಾಳಿ ಮಾಡಿದ್ದಾನೆ. ದಾಳಿಯನ್ನು ತಡೆಯಲೆತ್ನಿಸಿದ ಪುತ್ರಿ ಜುಮೈಲಾರಿಗೂ ಉಮರ್ ಫಾರೂಕ್ ಇರಿದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಜುಮೈಲಾ ಸ್ಥಳದಲ್ಲೇ ಮೃತಪಟ್ಟಿದ್ದರು.

ದಾಳಿಗೊಳಗಾಗಿ ಗಂಭೀರಾವಸ್ಥೆಯಲ್ಲಿದ್ದ ಶೇಕುಂಳೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪ್ರಕರಣದ ಆರೋಪಿ ಉಮರ್ ಫಾರೂಕ್ ನನ್ನು ಪೊಲೀಸರು ಸೋಮವಾರ ಸಂಜೆಯೇ ಬಂಧಿಸಿದ್ದಾರೆ.


Share with

Leave a Reply

Your email address will not be published. Required fields are marked *