ಕಂಬಳದಂತೆ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ಹೋರಾಟ.. ಕೋರ್ಟ್ ಮೆಟ್ಟಿಲೇರಲು ನಿರ್ಧಾರ..! ಶಾಸಕರ ಸಾಥ್

Share with

ಪುತ್ತೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ಹೋರಾಟ ಪ್ರಾರಂಭವಾಗಿದ್ದು, ಕೋಳಿ ಅಂಕ ಬೇಕು ಎಂದು ಇದೀಗ ನ್ಯಾಯಾಲಯದ ಮೆಟ್ಟಿಲೇರಲು ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ಸಮಿತಿ ನಿರ್ಧರಿಸಿದೆ.ಇದರೊಂದಿಗೆ ಕಂಬಳ ರೀತಿಯಲ್ಲೇ ಮತ್ತೊಂದು ಹೋರಾಟಕ್ಕೆ ಕರಾವಳಿ ಮುಂದಾಗಿದೆ.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕೋಳಿ ಅಂಕ ನಡೆಸಲು ಪೋಲೀಸರ ನಿರ್ಬಧಿಸಿದ ಹಿನ್ನೆಲೆ.ಇದೀಗ ಕೋಳಿ ಅಂಕಕ್ಕಾಗಿ ಹೋರಾಟ ಪ್ರಾರಂಭವಾಗಿದೆ. ಈ ಹಿನ್ನಲೆ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ಸಮಿತಿಯ ಸಭೆ ಫೆಬ್ರವರಿ 1 ರಂದು ಪುತ್ತೂರಿನಲ್ಲಿ ಸಭೆ ಸೇರಿದ್ದು, ಈ ವೇಳೆ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಹೋರಾಟದ ಮೊದಲ ಭಾಗವಾಗಿ ಇದೇ ತಿಂಗಳಿನಲ್ಲಿ ಕೋಳಿಗಳೊಂದಿಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುತ್ತಿಗೆ ಹಾಕಲು ನಿರ್ಧರಿಸಲಾಗಿದ್ದು, ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳ ಕೋಳಿ ಅಂಕ ಆಯೋಜಕರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ.

ಅಲ್ಲದೆ ಜೂಜು ರಹಿತ ಕೋಳಿ ಅಂಕ ನಡೆಸಲು ಅನುಮತಿ ನೀಡುವಂತೆ ನ್ಯಾಯಾಲಯ ಮೆಟ್ಟಲೇರಲು ನಿರ್ಧರಿಸಲಾಗಿದ್ದು, ಕಂಬಳದಂತೆ ಕರಾವಳಿಯ ಸಾಂಪ್ರದಾಯಿಕ ಕೋಳಿ ಅಂಕದ ಪರವಾಗಿ ಸರಕಾರದ ಗಮನ ಸೆಳೆಯಲು ತೀರ್ಮಾನಿಸಲಾಗಿದೆ. ಅಲ್ಲದೆ ಕೋರ್ಟ್ ನ ಎಲ್ಲಾ ಖರ್ಚು ವೆಚ್ಚಗಳನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರೇ ನೋಡಿಕೊಳ್ಳುತ್ತಾರೆ ಎಂದು ಆಶ್ವಾಸನೆ ನೀಡಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಸಾಂಪ್ರದಾಯಿಕ ಸೇರಿದಂತೆ ಎಲ್ಲಾ ಪ್ರಕಾರದ ಕೋಳಿ ಅಂಕಗಳಿಗೆ ಪೊಲೀಸರು ದಾಳಿ ಮಾಡುತ್ತಿದ್ದಾರೆ. ಪೋಲೀಸರ ಕ್ರಮಕ್ಕೆ ಜನಪ್ರತಿನಿಧಿಗಳು ಸೇರಿದಂತೆ ಕೋಳಿ ಅಂಕ ಪ್ರಿಯರ‌ ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.


Share with

Leave a Reply

Your email address will not be published. Required fields are marked *