ಇಸ್ಲಾಮಾಬಾದ್, ಫೆಬ್ರವರಿ 06: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನಲ್ಲಿರುವ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, 10ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಆಗ್ನೇಯ ಇಸ್ಲಾಮಾಬಾದ್ನ ತರ್ಲೈ ಕಲಾನ್ ಪ್ರದೇಶದ ಖದೀಜಾ ತುಲ್ ಕುಬ್ರಾ ಮಸೀದಿಯಲ್ಲಿ ಶುಕ್ರವಾರ ಪ್ರಾರ್ಥನೆಯ ಸಮಯದಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ಸ್ಥಳಕ್ಕೆ ರಕ್ಷಣಾ ತಂಡಗಳು ತಲುಪಿವೆ.ಸಾವುನೋವುಗಳ ಬಗ್ಗೆ ತಕ್ಷಣಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ, ಆದರೆ ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಇದೆ.





