ಕೊಲಂಬೊದಲ್ಲಿ ಕಕ್ಕಾಬಿಕ್ಕಿಯಾದ ಪಾಕಿಸ್ತಾನ; ಭಾರತಕ್ಕೆ 61 ರನ್ ಜಯ

Share with

ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ 2026 ರ ಟಿ20 ವಿಶ್ವಕಪ್ನಲ್ಲಿ (T20 World Cup 2026) ಭಾರತ ಹಾಗೂ ಪಾಕಿಸ್ತಾನ (India vs Pakistan) ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಇಶಾನ್ ಕಿಶನ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 175 ರನ್ ಕಲೆಹಾಕಿ, ಪಾಕಿಸ್ತಾನಕ್ಕೆ 176 ರನ್ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ, ಭಾರತದ ಕರಾರುವಕ್ಕಾದ ದಾಳಿಗೆ ಕಕ್ಕಾಬಿಕ್ಕಿಯಾಗಿ ಪೂರ್ಣ 20 ಓವರ್ಗಳನ್ನು ಆಡಲಾಗದೆ 114 ರನ್ಗಳಿಗೆ ಆಲೌಟ್ ಆಯಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸೂಪರ್ 8 ಸುತ್ತಿಗೆ ಟಿಕೆಟ್ ಖಚಿತಪಡಿಸಿಕೊಂಡಿದೆ. ಹಾಗೆಯೇ ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ ವಿರುದ್ಧ ಗೆಲುವಿನ ಅಂತರವನ್ನು8-1 ಕ್ಕೆ ಕೊಂಡೊಯ್ದಿದೆ.


Share with

Leave a Reply

Your email address will not be published. Required fields are marked *