ಅಕ್ಷಯ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲ್ ಇವರಿಗೆ ಸಾಧಕ ಸನ್ಮಾನ

Share with

ಮಂಗಳೂರು, ಫೆ.25: ಕನ್ನಡಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿಯ ಬೆಳ್ಳಿಹಬ್ಬ ಸಂಭ್ರಮವು ಮಂಗಳೂರು ಬಳಿಯ ಮರೋಳಿ ಸೂರ್ಯವುಡ್ಸ್‌ನಲ್ಲಿ ಅತ್ಯಂತ ವೈಭವಯುತವಾಗಿ ನಡೆಯಿತು. ಈ ಸಂದರ್ಭದಲ್ಲಿ ಪುತ್ತೂರಿನ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಜಯಂತ್ ನಡುಬೈಲು ಅವರನ್ನು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆಗಾಗಿ ಕನ್ನಡಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಗ್ರಾಮೀಣ ವಿದ್ಯಾರ್ಥಿಗಳಿಗೆ ಉದ್ಯೋಗಪೂರಕ ಹಾಗೂ ಆಧುನಿಕ ಶಿಕ್ಷಣ ಒದಗಿಸುವ ಉದ್ದೇಶದಿಂದ 2019ರಲ್ಲಿ ಅಕ್ಷಯ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಮೂಲಕ ಅಕ್ಷಯ ಕಾಲೇಜು ಸ್ಥಾಪಿಸಿದ ಅವರು, ಪುತ್ತೂರಿನಲ್ಲಿ ಮೊದಲ ಬಾರಿಗೆ ವಿಮಾನಯಾನ (Aviation), ಕೃತಕ ಬುದ್ಧಿಮತ್ತೆ (Artificial Intelligence), ಹೋಟೆಲ್ ಮ್ಯಾನೇಜ್‌ಮೆಂಟ್ ಹಾಗೂ ವಿಜ್ಞಾನ ವಿಭಾಗದ ಕೋರ್ಸ್‌ಗಳನ್ನು ಆರಂಭಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇಂದು ಅಕ್ಷಯ ಶಿಕ್ಷಣ ಸಂಸ್ಥೆಯಲ್ಲಿ ನೂರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಉದ್ಯಮ ಕ್ಷೇತ್ರದಲ್ಲಿ ಕೇವಲ 100 ಕೋಳಿಗಳೊಂದಿಗೆ ಆರಂಭಿಸಿದ ಕೋಳಿ ಸಾಕಾಣಿಕೆ ಉದ್ಯಮವನ್ನು ಹಂತ ಹಂತವಾಗಿ ವಿಸ್ತರಿಸಿ ಲಕ್ಷಾಂತರ ಕೋಳಿಗಳ ಮಟ್ಟಕ್ಕೆ ಬೆಳೆಸಿ, ಅನೇಕ ಮಂದಿಗೆ ಉದ್ಯೋಗಾವಕಾಶ ಕಲ್ಪಿಸಿದ್ದಾರೆ. ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿಯೂ ವಿವಿಧ ಸಂಘ–ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿರುವ ಅವರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಈ ಶಿಕ್ಷಣ ಮತ್ತು ಸಮಾಜಮುಖಿ ಸಾಧನೆಯನ್ನು ಗುರುತಿಸಿ ಅವರಿಗೆ ಈ ಗೌರವ ಪ್ರದಾನ ಮಾಡಲಾಗಿದೆ.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಕ್ಯಾಪ್ಟನ್ ಬೃಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರಕುಮಾರ್, ಮಾಹೆ ಸಹಕುಲಾಧಿಪತಿ ಡಾ. ಹೆಚ್.ಎಸ್. ಬಲ್ಲಾಳ್, ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *