ಮುಂಬೈ: ಅಮೆರಿಕ, ಇರಾನ್ ನಡುವಿನ ಯುದ್ಧ, ಖಮೇನಿ ಸಾವು ಹಾಗೂ ತೈಲ ಬೆಲೆ ಏರಿಕೆಯ ಪರಿಣಾಮ ಸೋಮವಾರ (ಮಾ.01) ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 1,000ಕ್ಕೂ ಅಧಿಕ ಅಂಕಗಳ ಭಾರೀ ಕುಸಿತದೊಂದಿಗೆ ವಹಿವಾಟು ಆರಂಭಗೊಂಡಿದೆ.

ಷೇರುಪೇಟೆ ಸಂವೇದಿ ಸೂಚ್ಯಂಕ 1,047.21 ಅಂಕಗಳಷ್ಟು ಇಳಿಕೆಯೊಂದಿಗೆ 80,235.82 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 316 ಅಂಕಗಳಷ್ಟು ಕುಸಿತದೊಂದಿಗೆ 24,862.75 ಅಂಕಗಳಿಗೆ ಇಳಿಕೆಯಾಗಿದೆ.
ಸಂವೇದಿ ಸೂಚ್ಯಂಕ, ನಿಫ್ಟಿ ಕುಸಿತದಿಂದಾಗಿ ವೋಡಾಫೋನ್ ಐಡಿಯಾ ಲಿಮಿಟೆಡ್, ಯೆಸ್ ಬ್ಯಾಂಕ್, ಇಂಡಿಯನ್ ಆಯಿಲ್ ಕಾರ್ಪೋರೇಶನ್, ರೆಡಿಗಂಟನ್ ಲಿಮಿಟೆಡ್, ಬ್ಯಾಂಕ್ ಆಫ್ ಮಹಾರಾಷ್ಟ್ರ ಇಂಟರ್ ಗ್ಲೋಬ್ ಏವಿಯೇಷನ್, ಬಿರ್ಲಾ ಕಾರ್ಪೋರೇಶನ್, ರಾಜೇಶ್ ಎಕ್ಸ್ ಪೋರ್ಟ್ಸ್ ಷೇರುಗಳು ನಷ್ಟ ಕಂಡಿದೆ.
ಮತ್ತೊಂದೆಡೆ ಸ್ಟರ್ ಲೈಟ್ ಟೆಕ್ನಾಲಜೀಸ್ ಲಿಮಿಟೆಡ್, ಭಾರತ್ ಡೈನಾಮಿಕ್ಸ್ ಲಿಮಿಟೆಡ್, ಮಲ್ಟಿ ಕಮೋಡಿಟಿ ಎಕ್ಸ್ ಚೇಂಜ್ ಆಫ್ ಇಂಡಿಯಾ, ಕೆಇಐ ಇಂಡಸ್ಟ್ರೀಸ್, ಮಿಶ್ರಾ ಧಾತು ನಿಗಮ್, ಭಾರತ್ ಎಲೆಕ್ಟ್ರಾನಿಕ್ಸ್ ಷೇರುಗಳು ಲಾಭಗಳಿಸಿದೆ.




