ಯುದ್ಧದ ಕಾರ್ಮೋಡ: ದೇಶದಲ್ಲಿ 250ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು!

Share with

ಮುಂಬೈ/ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ, ಭಾರತದ ವಿಮಾನಯಾನ ಕ್ಷೇತ್ರದ ಮೇಲೆ ಭಾರಿ ಹೊಡೆತ ಬಿದ್ದಿದೆ. ಮಂಗಳವಾರ ಒಂದೇ ದಿನ ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ವಿಮಾನ ನಿಲ್ದಾಣಗಳಲ್ಲಿ ಒಟ್ಟು 250ಕ್ಕೂ ಹೆಚ್ಚು ವಿಮಾನಗಳ ಸಂಚಾರ ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಲ್ಕನೇ ದಿನವೂ ಮುಂದುವರಿದ ವ್ಯತ್ಯಯ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಸ್ಥಿತಿ ಉಲ್ಬಣಗೊಂಡಿರುವುದರಿಂದ ಸತತ ನಾಲ್ಕನೇ ದಿನವೂ ವಿಮಾನಯಾನ ಸೇವೆಯಲ್ಲಿ ಏರುಪೇರಾಗಿದೆ. ಸುರಕ್ಷತೆಯ ದೃಷ್ಟಿಯಿಂದ ವಿಮಾನಯಾನ ಸಂಸ್ಥೆಗಳು ಅಂತಾರಾಷ್ಟ್ರೀಯ ಮತ್ತು ಪಶ್ಚಿಮ ದೇಶಗಳಿಗೆ ತೆರಳುವ ವಿಮಾನಗಳನ್ನು ರದ್ದುಗೊಳಿಸಿವೆ.

ಮುಂಬೈ-107, ದೆಹಲಿ- 80, ಬೆಂಗಳೂರು (ಕೆಐಎ)-42 ಮತ್ತು ಚೆನ್ನೈ- 30 ವಿಮಾನಗಳ ಸಂಚಾರ ರದ್ದುಗೊಳಿಸಲಾಗಿದೆ.


Share with

Leave a Reply

Your email address will not be published. Required fields are marked *