ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ‘ಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯ’ವನ್ನು ನಿಲ್ಲಿಸಲು ‘ರೋಹಿತ್ ವೇಮುಲ ಕಾಯ್ದೆ’ಯನ್ನು ಜಾರಿಗೆ ತರವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ವಿವಿಗಳಲ್ಲಿ ಸಮಾನ ಅವಕಾಶ ಒದಗಿಸುವ ಕೇಂದ್ರಗಳನ್ನು ಸ್ಥಾಪಿಸುವುದು. ಜಾತಿ ತಾರತಮ್ಯ ನಡೆಸಿದರೆ ಕಠಿಣ ಶಿಕ್ಷೆ ವಿಧಿಸುವುದು. ವಿದ್ಯಾರ್ಥಿಗಳ ಕುಂದು ಕೊರತೆಗಳನ್ನು ನೀಗಿಸಲು ಪರಿಹಾರ ಕೇಂದ್ರಗಳನ್ನು ಸ್ಥಾಪಿಸುವ ಯೋಜನೆಗಳನ್ನು ಈ ಕಾಯ್ದೆ ಹೊಂದಿದೆ.




