ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ LPG ಸಿಲಿಂಡರ್ ಕೊರತೆ ಬಗ್ಗೆ ಕೇಂದ್ರಕ್ಕೆ ಪತ್ರ ಬರೆದಿರುವ BJP ಸಂಸದ ತೇಜಸ್ವಿ ಸೂರ್ಯ, ಹೋಟೆಲ್ & ಆತಿಥ್ಯ ಕ್ಷೇತ್ರಕ್ಕೆ ನಿರಂತರ LPG ಪೂರೈಕೆ ಖಚಿತಪಡಿಸುವಂತೆ ಮನವಿ ಮಾಡಿದ್ದಾರೆ. ಹೋಟೆಲ್ & ರೆಸ್ಟೋರೆಂಟ್ ಕ್ಷೇತ್ರವು ದಿನನಿತ್ಯದ ಅಡುಗೆ ಕಾರ್ಯಗಳಿಗೆ ಬಹುಪಾಲು ವಾಣಿಜ್ಯ LPG ಮೇಲೆ ಅವಲಂಬಿತವಾಗಿದೆ.

LPG ಪೂರೈಕೆಯಲ್ಲಿ ವ್ಯತ್ಯಯ ಉಂಟಾದರೆ ಹೋಟೆಲ್ ಉದ್ಯಮ, ಉದ್ಯೋಗ & ಗ್ರಾಹಕರ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಉಲ್ಲೇಖಿಸಿದ್ದಾರೆ.




