ರಾಜ್ಯದಲ್ಲಿ ಕೆಲವು ವಾರಗಳಿಂದ ಮೊಟ್ಟೆ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. 7.06 ರೂ. ಇದ್ದ 1 ಮೊಟ್ಟೆಯ ಬೆಲೆ ಈಗ 4.60 ರೂ.ಗೆ ಇಳಿಕೆಯಾಗಿದೆ. ರಫ್ತು ವ್ಯತ್ಯಯ, ಹಬ್ಬದ ಕಾಲದ ಬೇಡಿಕೆ ಕುಸಿತ ಹಾಗೂ ಬೇಸಿಗೆ ಪರಿಣಾಮ ಮೊಟ್ಟೆ ಬೆಲೆ ಇಳಿಕೆಗೆ ಕಾರಣವಾಗಿದೆ.

ಕಳೆದ 15 ದಿನಗಳಲ್ಲಿ ರಾಜ್ಯದಲ್ಲಿ ಮೊಟ್ಟೆ ದರದಲ್ಲಿ ದೊಡ್ಡ ಮಟ್ಟದ ಇಳಿಕೆ ಕಂಡುಬಂದಿದೆ ಎಂದು ರಾಷ್ಟ್ರೀಯ ಮೊಟ್ಟೆ ಸಮನ್ವಯ ಸಮಿತಿ ತಿಳಿಸಿದೆ. ರಾಜ್ಯದಲ್ಲಿ ಪ್ರತಿದಿನ ಸುಮಾರು 2.2 ಕೋಟಿ ಮೊಟ್ಟೆಗಳು ಉತ್ಪಾದನೆಯಾಗುತ್ತವೆ.




