ರಾಜ್ಯದಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು, ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಬೃಹತ್ ಹೋರಾಟದ ಬೆನ್ನಲೇ ಸದ್ಯ 56 ಸಾವಿರ ಹುದ್ದೆಗಳನ್ನು ಸರ್ಕಾರ ತುಂಬಿಕೊಳ್ಳುತ್ತದೆ ಎಂದು ಸರ್ಕಾರವು ವಿ.ಪರಿಷತ್ಗೆ ಉತ್ತರಿಸಿದೆ. MLC ನಮೋಶಿ, 2.84 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ, ಯಾಕೆ ಭರ್ತಿಯಾಗುತ್ತಿಲ್ಲ? ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಭಾನಾಯಕ ಎನ್ ಎಸ್ ಬೋಸರಾಜು, ಅಧಿಕಾರಿಗಳ ಜತೆ ಮಾತನಾಡಿದ್ದೇವೆ, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.





