ಅಡುಗೆ ಕೆಲಸ ಮಾಡುತ್ತಿದ್ದ ಯುವಕ ಆತ್ಮಹತ್ಯೆ

Share with

ಶಿರ್ವ: ಅಡುಗೆ ಕೆಲಸ ಮಾಡುತ್ತಿದ್ದ ಯುವಕನೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ (ಮಾ.13) ಶಂಕರಪುರ ಸಾಲ್ಮರದ ಕ್ಯಾಟರಿಂಗ್ ಶೆಡ್ ಬಳಿ ನಡೆದಿದೆ.

ಗೌತಮ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಸಾಲ್ಮರದ ಕ್ಯಾಟರಿಂಗ್ ಶೆಡ್ ಬಳಿಯ ರೂಮ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಬೈಂದೂರು ಮೂಲದ ಈತ ಅವಿವಾಹಿತನಾಗಿದ್ದು, ಕಳೆದ 5-6 ವರ್ಷಗಳಿಂದ ಶಂಕರಪುರದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ. ಎಲ್ಲರೊಂದಿಗೆ ಬೆರೆಯುತ್ತಿದ್ದ ಗೌತಮ್ ಸ್ಥಳೀಯ ವಿವಿಧ ಸಂಘ-ಸಂಸ್ಥೆಯಲ್ಲಿ ಸಕ್ರಿಯವಾಗಿದ್ದನು. ಘಟನಾ ಸ್ಥಳಕ್ಕೆ ಶಿರ್ವ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.


Share with

Leave a Reply

Your email address will not be published. Required fields are marked *