ಪರೀಕ್ಷೆಯ ಸಮಯದಲ್ಲಿ TV ನೋಡಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು 9ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ. ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗಣೇಶನಗರದಲ್ಲಿ ನಡೆದಿದೆ. ಶುಭಂ ನಾಗೇಶ ನಾಯ್ಕ(15) ಮೃತ ದುರ್ದೈವಿ.

ಸದ್ಯ ಪರೀಕ್ಷೆಗಳು ನಡೆಯುತ್ತಿರುವುದರಿಂದ, ಮನೆಯಲ್ಲಿ TV ನೋಡುವ ಬದಲು ಓದಿನ ಕಡೆ ಗಮನಹರಿಸುವಂತೆ ಪೋಷಕರು ಆತನಿಗೆ ತಿಳಿಹೇಳಿದ್ದರು. ಇದರಿಂದ ತೀವ್ರವಾಗಿ ನೊಂದ ಬಾಲಕ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾನೆ.




