ಇಸ್ರೇಲ್-ಇರಾನ್ ನಡುವೆ ಸಂಘರ್ಷ; ಶಾಲೆಗಳಲ್ಲಿ ಗ್ಯಾಸ್ ಕೊರತೆ.. ಸೌದೆ ಒಲೆಗಳೇ ಗತಿ..!

Share with

ಕೊಟ್ಟಿಗೆಹಾರ: ಇಸ್ರೇಲ್-ಇರಾನ್ ನಡುವಿನ ಸಂಘರ್ಷದ ಪರಿಣಾಮ ಗ್ಯಾಸ್ ಅಭಾವ ಉಂಟಾದ ಹಿನ್ನೆಲೆ ಸರ್ಕಾರಿ ಶಾಲೆಯಲ್ಲಿ ಅಡುಗೆ ಮಾಡಲು ಸಿಬ್ಬಂದಿ ಪರದಾಡುತ್ತಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿ ನಡೆದಿದೆ.

ಕೊಟ್ಟಿಗೆಹಾರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಳೆದ ಐದು ದಿನಗಳಿಂದ ಗ್ಯಾಸ್ ಸಿಲಿಂಡ‌ರ್ ಲಭ್ಯವಾಗದೆ ಅಡುಗೆ ಸಿಬ್ಬಂದಿ ಬಯಲು ಪ್ರದೇಶದಲ್ಲಿ ಸೌದೆ ಒಲೆ ಹಾಕಿ ಅಡುಗೆ ಮಾಡುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಶಾಲೆಯಲ್ಲಿ ಸುಮಾರು 60ರಿಂದ 70 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಮಧ್ಯಾಹ್ನದ ಊಟ ತಯಾರಿಸಲು ಅಡುಗೆ ಸಿಬ್ಬಂದಿ ಸಾಕಷ್ಟು ಕಷ್ಟ ಅನುಭವಿಸುತ್ತಿದ್ದಾರೆ. ಪರೀಕ್ಷಾ ಸಮಯವಾಗಿರುವುದರಿಂದ ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾಠಗಳ ಪುನರವಲೋಕನ ಮಾಡಿಸುತ್ತಿರುವ ನಡುವೆ ಅಡುಗೆ ವ್ಯವಸ್ಥೆಯ ಸಮಸ್ಯೆ ಎದುರಾಗಿದೆ.

ಜಿಲ್ಲಾಧಿಕಾರಿಗಳ ಸೂಚನೆ ಇದ್ದರೂ ಗ್ಯಾಸ್ ಏಜೆನ್ಸಿಯ ನಿರ್ಲಕ್ಷ್ಯದಿಂದ ಈ ಸಮಸ್ಯೆ ಉಂಟಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ತಕ್ಷಣವೇ ಶಾಲೆಗೆ ಗ್ಯಾಸ್ ಸೌಲಭ್ಯ ಕಲ್ಪಿಸುವಂತೆ ಶಾಲಾ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಸಂಬಂಧಪಟ್ಟ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.


Share with

Leave a Reply

Your email address will not be published. Required fields are marked *