ಕಾಸರಗೋಡು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಶೀಘ್ರ ಬಿಡುಗಡೆಯಾಗಲಿದ್ದು, ಮಂಜೇಶ್ವರದಿಂದ ಪಕ್ಷದ ಮಾಜಿ ಅಧ್ಯಕ್ಷ ಕೆ. ಸುರೇಂದ್ರನ್ ಮತ್ತು ಕಾಸರಗೋಡು ನಿಂದ ಪಕ್ಷದ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ. ಎಲ್. ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

ಕಳೆದ ಗುರುವಾರ ದಿಲ್ಲಿಯಲ್ಲಿ ನಡೆದ ಬಿಜೆಪಿಯ ಕೇಂದ್ರ ಚುನಾವಣ ಸಮಿತಿ (ಸಿಇಸಿ) ಸಭೆಯಲ್ಲಿ ಕೇರಳದಲ್ಲಿ 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.
ನೀತಿ ಸಂಹಿತೆ ಜಾರಿ
ಚುನಾವಣೆ ವೇಳಾಪಟ್ಟಿ ಘೋಷಣೆಯ ಕ್ಷಣದಿಂದಲೇ ಚುನಾವಣೆಗೆ ತಯಾರಿ ನಡೆಸುತ್ತಿರುವ ಕೇರಳ ಸಹಿತ ಇತರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.




